ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗುವ ಮೂಲಕ ಬಹು ವರ್ಷಗಳ ಬೇಡಿಕೆ ಈಡೇರಿದೆ- ಅಶ್ರಫ್ ಶಾ ಮಾಂತೂರು
ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಆಗುವ ಮೂಲಕ ಬಹು ವರ್ಷಗಳ ಬೇಡಿಕೆಯೊಂದು ಈಡೇರಿದ್ದು ಮೆಡಿಕಲ್ ಕಾಲೇಜು ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಇದಕ್ಕಾಗಿ ಅವಿರತ ಪರಿಶ್ರಮಪಟ್ಟು ಯಶಸ್ವಿಯಾದ ನಮ್ಮ ಶಾಸಕ ಅಶೋಕ್ ಕುಮಾರ್ ರೈ ಅವರು ಅಭಿನಂದನಾರ್ಹರು ಎಂದು ಉದ್ಯಮಿ, ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ ನ ಅಧ್ಯಕ್ಷ ಅಶ್ರಫ್ ಶಾ ಮಾಂತೂರು ತಿಳಿಸಿದ್ದಾರೆ.

ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಸ್ಥಾಪನೆ ಆದಲ್ಲಿ ಪುತ್ತೂರು ಮತ್ತಷ್ಟು ಅಭಿವೃದ್ಧಿ ಕಾಣಲಿದ್ದು ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರುಗೊಂಡಿರುವುದು ನಮಗೆಲ್ಲ ಹೆಮ್ಮೆ ತಂದಿದ್ದು ಆದಷ್ಟು ಬೇಗ ಇದರ ಕಾರ್ಯ ಚಟುವಟಿಕೆಗಳು ನಡೆಯಲಿ ಎಂದು ಅವರು ಆಶಿಸಿದರು.