ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ;
ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮಾ.10, ರಾತ್ರಿ ಸಂಪಾಜೆ ಸಮೀಪ ನಡೆದಿದೆ.

ಮೂಲತಃ ಮಂಡ್ಯ ಮೂಲದವರಾಗಿದ್ದ ಚಾಲಕ ಅರುಣ್, ಪತ್ನಿ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿ ಮಧ್ಯ ರಾತ್ರಿ ಯಾರು ಇಲ್ಲದೆ ಸಮಸ್ಯೆಗೆ ಸಿಲುಕಿದ್ದರು. ಈ ಸಮಯದಲ್ಲಿ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಳ್ಯ ಪರಿಸರದ ನಾಸಿರ್, ಸಾದಿಕ್ ಹಾಗೂ ಗೆಳೆಯರು, ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮ ಕಾರಿನ ಮೂಲಕ ಸುಳ್ಯ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ ಎಂದು ತಿಳಿದು ಬಂದಿದೆ.