ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ-ಸೂಲಿಬೆಲೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್‌ಪಿ ಹಮ್ಮಿಕೊಂಡಿದ್ದ ‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ಕರೆ ನೀಡಿದರು.

ಎಲ್ಲಿಯವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ.
ನಮ್ಮಗಂಡು ಮಕ್ಕಳಿಗೂ ಈ ಬಗ್ಗೆ ಹೇಳಬೇಕು. ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡುತ್ತೀರಾ ? ಮದುವೆಯಾಗಲು ಹುಡುಗಿ ಸಿಗಲ್ಲ ಎಷ್ಟು ದಿನ ಹೇಳೀರಿ, ಸ್ವಲ್ಪ ಪಕ್ಷದ ಸಮಾಜದವರನ್ನು ನೋಡಿ ಅಲ್ವಾ ಎಂದು ಸೂಲಿಬೆಲೆ ಹೇಳಿದರು.
ಆರಂಭದಲ್ಲಿ ನಮ್ಮ (ಹಿಂದೂ) ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ, ಹೆಸರನ್ನೇ ಬದಲಾಯಿಸಿ ಹಿಂದೂ ಹೆಸರು ಇಟ್ಟುಕೊಂಡು ಪ್ರೀತಿಯ ನಾಟಕವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.