ಇನ್ ಸ್ಪೈರ್ ಅವಾರ್ಡ್: ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪುತ್ತೂರು:ಡಿಪಾರ್ಟ್ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ಇದರ ಇನ್ ಸ್ಪೈರ್ ಅವಾರ್ಡ್ ಮಾನಕ್ 2024 -25 ಕ್ಕೆ ಪಾಪೆ ಮಜಲು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಶಾಲೆಯ 9ನೇ ತರಗತಿಯ ನಿಶ್ಮಿತಾ ಮತ್ತು ರಂಜಿತ್ ಇವರು ತಯಾರಿಸಿದ ಮಾದರಿಗಳು ಜಿಲ್ಲಾ ಮಟ್ಟಕ್ಕೆ
ಆಯ್ಕೆಯಾಗಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಮತ್ತು
ಎಸ್ ಡಿಎಂಸಿ ಯವರು ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.