ಕ್ರೈಂರಾಷ್ಟ್ರೀಯ

ಹಾಸ್ಟೆಲ್ ಗೆ ದಾಳಿ ನಡೆಸಿ 2 ಕೆಜಿ ಗಾಂಜಾ ವಶಪಡಿಸಿದ ಪೊಲೀಸರು

ತಿರುವನಂತಪುರ: ಹಾಸ್ಟೆಲ್‌ ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು 2 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ.




ಕಲಾಮಸ್ಸೇರಿ ಪಾಲಿಟೆಕ್ನಿಕ್‌ ನ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ಮಾಡಿ, ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.


ಕೇರಳದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನದಿಂದಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಸಂಬಂಧ ಕುಲಪತಿಗಳ ಸಭೆ ಕರೆದಿದ್ದ ಕುಲಾಧಿಪತಿಯೂ ಆದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರು ವಿಶೇಷ ಕಾರ್ಯಾಚರಣೆಗೆ ಸೂಚಿಸಿದ್ದರು.

Leave a Reply

Your email address will not be published. Required fields are marked *

error: Content is protected !!