ಕೋಮು ದ್ವೇಷ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ ಐ ಆರ್
ಮಂಗಳೂರು: ಕುತ್ತಾರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಆರೋಪ ಎದುರಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು.
ಪ್ರಚೋದನಕಾರಿ ಭಾಷಣ ಮಾಡಿ, ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.