ಶಾಸಕ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸುಮ್ಮನಾಗಿರಲಿಲ್ಲ. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.