ಪಕ್ಷದಿಂದ ಯತ್ನಾಳ್ ಉಚ್ಚಾಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ಯತ್ನಾಳ್ ಅವರ ಉಚ್ಛಾಟನೆ ಆದೇಶ ಹೊರಬೀಳುತ್ತಿದ್ದಂತೆಯೇ ಟ್ವೀಟ್ ಮಾಡಿರುವ ವಿಜಯೇಂದ್ರ, ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ತಿಳಿಸಿದ್ದಾರೆ.