ಸುಳ್ಯ: ಗೂಡ್ಸ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಜಾಲ್ಲೂರ್ ಗ್ರಾಮದ ವಿನೋಬಾನಗರದಲ್ಲಿ ಇಂದು ಮುಂಜಾನೆ ನಡೆದಿದೆ.
ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಂಬ ತುಂಡಾಗಿದೆ ಎನ್ನಲಾಗಿದೆ. ಅಪಘಾತದಿಂದ ಈ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.