ವಕ್ಫ್ ಕಾಯ್ದೆ: ಮುಂದಿನ ವಿಚಾರಣೆಯವರೆಗೆ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಎ.17ರಂದು ಆದೇಶ ನೀಡಿದೆ.

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪ್ರಾರಂಭಿಸಿದೆ.
ಇಂದು ವಿಚಾರಣೆ ಮುಂದುವರೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಸಿಂಧುತ್ವ ಪ್ರಶ್ನಿಸಿದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ 7 ದಿನಗಳ ಕಾಲಾವಕಾಶ ನೀಡಿದೆ.