ಸುಳ್ಯ: ಕಾರು-ಸ್ಕೂಟಿ ಅಪಘಾತ| ಅಣ್ಣ ಸ್ಥಳದಲ್ಲಿಯೇ ಸಾವು; ತಂಗಿ ಗಂಭೀರ
ಸುಳ್ಯ :ಮಾರುತಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಅಣ್ಣ ಮೃತಪಟ್ಟು ತಂಗಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಲಿಮಲೆ ಸಮೀಪದ ಜಬಳೆಯಲ್ಲಿ ನಡೆದಿದೆ.
ಮೃತಪಟ್ಟ ಯುವಕ ನಿಶಾಂತ್ ಬಾಜಿನಡ್ಕ ಎಂದು ತಿಳಿದು ಬಂದಿದೆ. ನಿಶಾಂತ್ ತಂಗಿಯನ್ನು ಕರೆದುಕೊಂಡು ಎಲಿಮಲೆಯಿಂದ ಮನೆಗೆ ಹೋಗುತ್ತಿದ್ದಾಗ ಸುಳ್ಯ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಕಾರು ಗುದ್ದಿದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಾಲಕ ನಿಶಾಂತ್ ಸ್ಥಳದಲ್ಲಿಯೇ ಮೃತಪಟ್ಟರೆ , ತೀವ್ರ ಗಾಯಗೊಂಡ ನಿಶಾಂತ್ ನ ತಂಗಿ ಮೋಕ್ಷಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪ್ರಥಮ ಚಿಕಿತ್ಸೆಯ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.



ಜಬಳೆ ಸಮೀಪದ ಬಾಜಿನಡ್ಕ ದೇವಿದಾಸ್ ಎಂಬವರ ಮಕ್ಕಳಾದ ನಿಶಾಂತ್ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಮೋಕ್ಷ 5 ನೇ ತರಗತಿ ವಿದ್ಯಾರ್ಥಿನಿ.
ನವರಾತ್ರಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿರುವ ಸಂದರ್ಭದಲ್ಲಿ ಅಣ್ಣ ತಂಗಿಯ