ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ
ಮಂಗಳೂರು: ಸುಹಾಸ್ ಶೆಟ್ಟಿಯನ್ನು ಮೇ.1ರಂದು ಮಂಗಳೂರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಈಗಾಗಲೇ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದ್ದು ಬಸ್ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ.