ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 8 ಆರೋಪಿಗಳ ಬಂಧನ
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, “ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು ಎಲ್ಲಾ ತರದ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ.” ಎಂದು ಹೇಳಿದರು.