ಮಂಗಳೂರಿನಲ್ಲಿ ಕಟ್ಟೆಚ್ಚರ
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹರಿದಾಡಿದ ಕಾರಣ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ರಾತ್ರಿ 9.30ಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆʼ ಎಂದು ಸಂದೇಶ ಹರಿದಾಡಿದ ಕಾರಣ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30 ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.
ಹೋಟೆಲ್, ಪಬ್, ಬಾರ್‌ಗಳು, ಫುಟ್‌ಪತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಲಾಗಿದೆ. ಕೆಲವು ದಿನ ಇದು ಮುಂದುವರಿಯಲಿದೆ ಎನ್ನಲಾಗುತ್ತಿದೆ.