ಕಬಕ: ಬಸ್ ಮತ್ತು ಬೈಕ್ ಅಪಘಾತ, ಓರ್ವ ಮೃತ್ಯು
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ.

ಪುತ್ತೂರು ಮಂಗಳೂರು ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನರಿಕೊಂಬು ನಿವಾಸಿ ಮೃತಪಟ್ಟಿದ್ದು, ಅವರ ಮಗ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರಿನಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಬಸ್ ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾದರೂ ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





