ಕ್ರೀಡೆರಾಷ್ಟ್ರೀಯ

ಕೊಹ್ಲಿಗೆ ಸಿರಾಜ್ ಭಾವುಕ ಪತ್ರ

14 ವರ್ಷಗಳ ಟೆಸ್ಟ್ ಕೆರಿಯರ್ ಗೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದು ನಿವೃತ್ತಿಯ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ನಿವೃತ್ತಿಗೆ ಅನೇಕರು ಅಘಾತ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು ಟೀಮ್ ಇಂಡಿಯಾದ ಬೌಲರ್ ಮೊಹಮ್ಮದ್ ಸಿರಾಜ್ ಕೊಹ್ಲಿ ನಿವೃತ್ತಿಗೆ ಭಾವುಕ ಪತ್ರವೊಂದನ್ನು ಬರೆದಿದ್ದು ‘ನನ್ನ ಸೂಪರ್ ಹೀರೋ’ ಎಂದು ಬರೆದುಕೊಂಡಿದ್ದಾರೆ.

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ಅಲ್ಲಿಂದ ಸುದೀರ್ಘ 14 ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಆಡಿದ್ದಾರೆ. ಈ ಪಯಣದಲ್ಲಿ ವಿರಾಟ್ ಅನೇಕ ಆಟಗಾರರಿಗೆ ಬೆನ್ನೆಲುಬಾಗಿ ನಿಂತಿದ್ದು, ಅವರಲ್ಲಿ ಸಿರಾಜ್ ಕೂಡ ಒಬ್ಬರು. ಇದೀಗ ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಸಿರಾಜ್ ಸಾಮಾಜಿಕ ಜಾಲತಾಣ ಇನ್ಸ್ಟಗ್ರಾಂನಲ್ಲಿ ಪತ್ರವೊಂದನ್ನು ಬರೆದಿದ್ದಾರೆ.

ಸಿರಾಬ್ ಬರೆದ ಪತ್ರದಲ್ಲೇನಿದೆ..?
ನನ್ನ ಸೂಪರ್ ಹೀರೋಗೆ…  ಟೆಸ್ಟ್ ಕ್ರಿಕೆಟ್‌ನಲ್ಲಿ ನಿಮ್ಮ ಅದ್ಭುತ ವೃತ್ತಿಜೀವನಕ್ಕೆ ಅಭಿನಂದನೆಗಳು. ನಿಮ್ಮ ಪರಂಪರೆ ಶಾಶ್ವತವಾಗಿ ಉಳಿಯುತ್ತದೆ. ನೀವು ನನ್ನಂತಹ ಪೀಳಿಗೆಯ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡಿದ್ದೀರಿ. ನಿಮ್ಮ ಸಾಧನೆಗಳನ್ನು ಮತ್ತು ಅದನ್ನು ಮುಂದುವರಿಸುತ್ತೀರಿ ಭಯ್ಯಾ. ನೀವು ಇಲ್ಲದ ಡ್ರೆಸ್ಸಿಂಗ್ ರೂಮ್, ಈ ಹಿಂದಿನಂತೆ ಇರುವುದಿಲ್ಲ.
ಯಾವಾಗಲೂ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು. ನಿಮಗೆ ಶುಭ ಹಾರೈಸುತ್ತೇನೆ. ಕಿಂಗ್ ವಿರಾಟ್ ಕೊಹ್ಲಿ ಭಯ್ಯಾ ಎಂದು ಮೊಹಮ್ಮದ್ ಸಿರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ತನ್ನನ್ನು ಕೆರಿಯರ್ನ ಉದ್ದಕ್ಕೂ ಬೆಂಬಲಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಸಿರಾಜ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!