ಕೊಲೆಯಾದ ಅಬ್ದುಲ್ ರಹಿಮಾನ್ ಮೃತದೇಹ ಕೊಳತ್ತಮಜಲಿಗೆ

ಮಂಗಳೂರು : ದುಷ್ಕರ್ಮಿಗಳಿಂದ ನಿನ್ನೆ ಕೊಲೆಯಾದ
ಅಬ್ದುಲ್ ರಹಿಮಾನ್ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು.
ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ಅಬ್ದುಲ್ ರಹಿಮಾನ್ ಅವರ ಮಯ್ಯತ್ ಸ್ನಾನ ಮಾಡಿ ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತನಲ್ಲಿ ಮೃತದೇಹವನ್ನು ಕೊಂಡೊಯ್ಯಲಾಯಿತು.
ಕುತ್ತಾರ್, ತೊಕ್ಕೊಟ್ಟು, ಪಂಪ್ ವೆಲ್, ಮಿತ್ತಬೈಲ್ ಮಾರ್ಗವಾಗಿ ಕೊಳತ್ತಮಜಲಿನ ಮನೆಗೆ ಕೊಂಡೊಯ್ದು ನಂತರ ಮುಹಿಯ್ಯುದ್ದೀನ್ ಜುಮಾ ಮಸ್ಟಿದ್ ಆವರಣದಲ್ಲಿ ದಫನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಮಾಡಿದ್ದಾರೆ.