ಕರಾವಳಿ

ದೇರಳಕಟ್ಟೆ: ತಡೆಗೋಡೆ ಕುಸಿದುಬಿದ್ದು ಬಾಲಕಿ ಮೃತ್ಯು

ದೇರಳಕಟ್ಟೆ: ಕೆಲ ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

Oplus_131072


ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (9.ವ) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!