ಕರಾವಳಿರಾಜ್ಯ

ಅರುಣ್ ಕುಮಾರ್ ಪುತ್ತಿಲಗೆ ಗಡಿ ಪಾರು ನೋಟೀಸ್: ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್‌ ಕುಮಾರ್‌ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.



ಈ ಪ್ರಕರಣದ ಪ್ರಕಾರ ಸ್ವತಃ ಅರುಣ್‌ಕುಮಾರ್‌ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.

ಒಂದು ವೇಳೆ ಅರುಣ್‌ ಕುಮಾರ್‌ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದೇ ಇದ್ದ ಪಕ್ಷದಲ್ಲಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!