ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು
ಬೆಂಗಳೂರು: 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ಇಬ್ಬರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ ಇಬ್ಬರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.
18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಭಾರಿ ಜನ ಹಾಗೂ ವಾಹನ ದಟ್ಟಣೆಯಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ.