ಬೆಂಗಳೂರು ನೂಕು ನುಗ್ಗಲು: ಮೃತರ ಸಂಖ್ಯೆ 10ಕ್ಕೇರಿಕೆ
ಬೆಂಗಳೂರು: ಆರ್ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ವಿಜಯೋತ್ಸವಕ್ಕಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳು ಸೇರಿದ್ದ ವೇಳೆ ನೂಕು ನುಗ್ಗಲು ಉಂಟಾಗಿದ್ದು ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎನ್ನಲಾಗುತ್ತಿದೆ.

ಸಂಭ್ರಮಾಚರಣೆ ಇದೀಗ ದೊಡ್ಡ ದುರಂತವಾಗಿ ಮಾರ್ಪಟ್ಟಿದ್ದು ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಆರ್ಸಿಬಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದ ವೇಳೆ ದುರ್ಘಟನೆ ನಡೆದಿದೆ.