ಬಂಧನ ಭೀತಿಯಲ್ಲಿದ್ದ ಭರತ್ ಕುಮ್ಡೇಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್
ಮಂಗಳೂರು: ಬಂಧನ ಭೀತಿಯಲ್ಲಿದ್ದ ಭರತ್ ಕುಮ್ಡೇಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪುತ್ತೂರಿನಲ್ಲಿ ನಡೆದ ಸುಹಾಸ್ ಶೆಟ್ಟಿಗೆ ನುಡಿನಮನ ಸಭೆಯಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ.

ಭರತ್ ಪರ ವಾದ ಮಂಡಿಸಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರಿಗೆ ಪೋಲಿಸ್ ಇಲಾಖೆ ಬಂಧನ ಸಹಿತ ಯಾವುದೇ ಒತ್ತಡ, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಅಲ್ಲದೆ, ವಿಚಾರಣೆಗೆ ಸಹಕರಿಸಲು ಸೂಚಿಸಿದೆ.
ಪ್ರಕರಣದ ತನಿಖೆಗೆ ಸಂಬಂಧಿಸಿ ತನಿಖಾ ತಂಡ ನಿನ್ನೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕುಮ್ಡೇಲ್ ನಲ್ಲಿ ಮನೆ ಶೋಧ ನಡೆಸಿತ್ತು.