ಪುತ್ತೂರು| ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಪ್ರಸಾರ ಮಾಡಿದ ಆರೋಪ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೋಷಿಯಲ್ ಮೀಡಿಯಾ ವಿರುದ್ದ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಹಲವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ.
ಆರೋಪಿ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬವರು ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದು, ಆ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂ.5ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.