ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ

ಬೆಂಗಳೂರು: ಐ ಪಿ ಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
1996 ಬ್ಯಾಚ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಮೂಲತಃ ಬಿಹಾರ ಮೂಲದವರು. ಬೆಂಗಳೂರು ಅಡಿಷನಲ್ ಕಮಿಷನರ್, ಸೆಂಟ್ರಲ್ ರೇಂಜ್ ಐಜಿಯಾಗಿ ಕಾರ್ಯ ನಿರ್ವಹಿಸಿದ್ದರು.