ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತ್ಯು
ಮುಂಬೈ: ರೈಲಿನಿಂದ ಹಳಿ ಮೇಲೆ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನಿಂದ ಹಳಿ ಮೇಲೆ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿರುವ ವರದಿಯಾಗಿದೆ. ರೈಲಿನೊಳಗಿನ ಅತಿಯಾದ ಜನಸಂದಣಿಯಿಂದಾಗಿ ಜನರು ಒಂದು ಬೋಗಿಯಿಂದ ಕೆಳಗೆ ಬೀಳಲು ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಜನದಟ್ಟಣೆಯಿಂದಾಗಿ ಪ್ರಯಾಣಿಕರು ರೈಲಿನ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ್ದಾರೆಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ.