ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್: ಪ್ರಕರಣ ದಾಖಲು

ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಗ್ರಾಮದ ಕಾಶಿಕಟ್ಟೆ ಮಾರ್ಗವಾಗಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಲಾಡ್ಜ್ ವೊಂದರ ಮುಂಭಾಗ ಯುವಕನೊಬ್ಬ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ತಡೆದು ನಿಲ್ಲಿಸಿ, ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಕೈಯಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವಾಟ್ಸಾಪ್ ಮೂಲಕ ಹರಿದಾಡಿದ್ದು ಘಟನೆಗೆ ಸಂಬಂಧಿಸಿ ಯುವಕನಿಗೆ ಹಲ್ಲೆ ಮಾಡಿದ ಆರೋಪಿ ಶಂಕರ್ ಎಂಬಾತನ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.