ದಕ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆ ನಾಳೆ ಜೂ.16ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.