ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು
ಕಡಬ: ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ. 16ರಂದು ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ದೋಳ್ವಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35ವ) ಎಂದು ತಿಳಿದು ಬಂದಿದೆ. ನೀರಿನ ಪಂಪ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ. ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ