ಮಂಗಳೂರು: ಬೀಡಿ ತುಂಡು ನುಂಗಿ 10 ತಿಂಗಳ ಮಗು ಮೃತ್ಯು
ಮಂಗಳೂರು: ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಅಡ್ಯಾರ್ನಲ್ಲಿ ನಡೆದಿದೆ. ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿತ್ತು ಎಂದು ತಿಳಿದು ಬಂದಿದೆ.

ಬಿಹಾರ ಮೂಲದ ದಂಪತಿಯ 10 ತಿಂಗಳ ಅನೀಶ್ಕುಮಾರ್ ಮೃತಪಟ್ಟ ಮಗು.
ಜೂನ್ 14ರಂದು ಈ ಘಟನೆ ನಡೆದಿದ್ದು ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆ ಫಲಿಸದೆ ಜೂನ್ 15ರ ಬೆಳಗ್ಗೆ ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ.
‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಸಾವಿಗೀಡಾಗಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಹಲವು ಬಾರಿ ಗಂಡನಿಗೆ ತಿಳಿಸಿದ್ದರೂ, ನಿರ್ಲಕ್ಷ್ಯ ಮಾಡಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ಮಗುವಿನ ತಾಯಿ ಆರೋಪಿಸಿರುವುದಾಗಿ ವರದಿಯಾಗಿದೆ.