ಇಸ್ರೇಲ್ ಮಾಡಿದ ದೊಡ್ಡ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ
ಟೆಹ್ರಾನ್: ನಮ್ಮ ಮೇಲೆ ದಾಳಿ ಮಾಡುವ ಮೂಲಕ ಇಸ್ರೇಲ್ ಅತೀ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ.

ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಖಮೇನಿ, ಹುತಾತ್ಮರ ಬಲಿದಾನವನ್ನು ವ್ಯರ್ಥ ಮಾಡಲು ಬಿಡುವುದಿಲ್ಲ. ಇರಾನ್ ಮೇಲೆ ದಾಳಿ ಮಾಡಿದ ಇಸ್ರೇಲ್ಗೆ ಶಿಕ್ಷೆ ಖಚಿತ ಎಂದು ಪ್ರತಿಜ್ಞೆ ಮಾಡಿದ್ದಾರೆ. ಇಸ್ರೇಲ್ಗೆ ಅಮೆರಿಕ ಶಸ್ತ್ರಾಸ್ತ್ರಗಳ ನೆರವು ನೀಡಬಾರದು. ನೆರವು ನೀಡಿದ್ದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೂ ಖಮೇನಿ ಎಚ್ಚರಿಕೆ ನೀಡಿದ್ದಾರೆ.
ಟ್ರಂಪ್ ಅವರ ಬೇಷರತ್ತಾದ ಶರಣಾಗತಿ ಹೇಳಿಕೆ ಹಾಸ್ಯಾಸ್ಪದವಾಗಿದ್ದು ಇರಾನ್ ಯಾವುದೇ ಕಾರಣಕ್ಕೂ ಶರಣಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.