ಉಪ್ಪಿನಂಗಡಿ: ಮೊಸಳೆ ಪ್ರತ್ಯಕ್ಷ
ಉಪ್ಪಿನಂಗಡಿ; ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಕಂಡು ಬಂದಿದೆ.

ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯರಲ್ಲಿ ತಿಳಿಸಿದ್ದು ಅವರು ನೋಡಲು ಹೋದಾಗ ಮೊಸಳೆಯು ನದಿ ದಡದಲ್ಲಿ ವಿಶ್ರಾಂತಿ ಪಡೆಯುವುದು ಕಂಡು ಬಂತು. ಇವರು ಸ್ವಲ್ಪ ಹತ್ತಿರಕ್ಕೆ ಹೋದಾಗ ಮೊಸಳ ಆಕ್ರಮಣಕಾರಿಯಂತೆ ಇವರ ಕಡೆ ನೋಡಿದ್ದು ಮತ್ತೆ ನದಿ ನೀರಿಗೆ ಇಳಿದು ಹೋಯಿತು ಎಂದು ತಿಳಿದು ಬಂದಿದೆ.
ಎರಡು ವರ್ಷಗಳ ಹಿಂದೆ ಪಂಜಳದ ನೇತ್ರಾವತಿ ನದಿಯಲ್ಲಿಯೂ ದೊಡ್ಡ ಮೊಸಳೆಗಳೆರಡು ಪ್ರತ್ಯಕ್ಷವಾಗಿದ್ದವು ಕಳೆದ ವರ್ಷ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ಬಳಿಯೂ ನೇತ್ರಾವತಿ ನದಿ ದಡದಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿತ್ತು ನದಿಯಲ್ಲಿ ಮೊಸಳೆಯಿರುವುದು ನದಿಗೆ ಮೀನು ಬೇಟೆಗೆಂದು ಹೋಗುವವರಲ್ಲಿ ಆತಂಕ ಸೃಷ್ಟಿಸಿದೆ.