ಅಂತಾರಾಷ್ಟ್ರೀಯಕ್ರೈಂ

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ

ಅಮೆರಿಕ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿ ಕೊಟ್ಟಿದ್ದು, ರಾತ್ರೋರಾತ್ರಿ ಇರಾನ್‌ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.



ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇರಾನ್‌ನ 3 ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಪಹಾನ್ ಮೇಲೆನಡೆಸಿರುವ ದಾಳಿ ಯಶಸ್ವಿಯಾಗಿದೆ. ಎಲ್ಲಾ ಯುದ್ಧ ವಿಮಾನಗಳು ಸುರಕ್ಷಿತವಾಗಿ ತಮ್ಮ ನೆಲೆಗೆ ಮರಳುತ್ತಿವೆ. ಈಗ ಯುದ್ಧ ವಿಮಾನಗಳು ಇರಾನಿನ ವಾಯುಪ್ರದೇಶ ತೊರೆಯುತ್ತಿವೆ. ಈಗ ಶಾಂತಿಯ ಸಮಯ’ ಎಂದು ಪೋಸ್ಟ್ ಮಾಡಿದ್ದಾರೆ.
ಇದರ ಬೆನ್ನಲ್ಲೇ ಇರಾನ್, ‘ನೀವು ಪ್ರಾರಂಭಿಸಿದ್ದೀರಿ, ಅದನ್ನು ನಾವು ಕೊನೆಗೊಳಿಸುತ್ತೇವೆ’ ಎಂದು ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ವರದಿಯಾಗಿದೆ.


ಇತ್ತ ಪರಮಾಣು ಕೇಂದ್ರ ಫೋರ್ಡೋ ಮೇಲಿನ ದಾಳಿಯನ್ನು ಇರಾನ್‌ನ ಸ್ಥಳೀಯ ಆಡಳಿತ ಕೋಮ್ ದೃಢಪಡಿಸಿದೆ. ಫೋರ್ಡೋ ಮೇಲೆ ಆರು ಅಮೆರಿಕನ್ ಬಾಂಬರ್‌ಗಳು ದಾಳಿ ಮಾಡಿವೆ. ನಟಾಂಜ್ ಮತ್ತು ಎಸ್ಪಹಾನ್ ಮೇಲೆ ಅಮೆರಿಕನ್ ಜಲಾಂತರ್ಗಾಮಿ ನೌಕೆಗಳು 30 ಟೊಮಾಹಾಕ್ ಕ್ಷಿಪಣಿಗಳೊಂದಿಗೆ ದಾಳಿ ನಡೆಸಿದೆ. ಇರಾನ್‌ನಿಂದ 400ಮೈಲುಗಳಷ್ಟು ದೂರದಲ್ಲಿ ಈ ದಾಳಿ ನಡೆದಿದೆ.

ಇರಾನ್ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. ಪರಮಾಣು ಸೋರಿಕೆಯ ಯಾವುದೇ ಬೆದರಿಕೆ ಇಲ್ಲ ಎಂದು ಇರಾನ್ ಸರ್ಕಾರಿ ವಾಹಿನಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!