ಖಿದ್ಮಾ ರಾಜ್ಯಮಟ್ಟದ ಭಾಷಣ ಸ್ಪರ್ಧೆ

ಪುತ್ತೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಹಾಗೂ ಅನ್ನದಾತ ಪ್ರಕಾಶನದಡಿಯಲ್ಲಿ ಭಾರತದ ಸ್ವಾತಂತ್ರೋತ್ಸವದ ಪ್ರಯುಕ್ತ ಪದವಿ ಪೂರ್ವದಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. 18 ರಿಂದ 26 ವಯಸ್ಸಿನವರಿಗೆ ಮಾತ್ರ ಅವಕಾಶವಿರುತ್ತದೆ. ಸ್ಪರ್ಧೆಗೆ ಸಂಬಂಧಪಟ್ಟ ಹೆಚ್ಚಿನ ವಿವರಣೆಗಾಗಿ 7349197313 ನಂಬರಿಗೆ ವಾಟ್ಸಪ್ ಮಾಡಬಹುದು ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷ ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ.