ಹೃದಯಾಘಾತಕ್ಕೆ ಬಲಿಯಾದ 22 ವರ್ಷದ ಯುವತಿ
ಹಾಸನ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಯುವತಿ ಬಲಿಯಾಗಿದ್ದಾಳೆ. ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲೇ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆ ವೇಳೆ ಸುಪ್ರಿಯಾ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.