ಸುಳ್ಯ: ಕಲ್ಲುಗುಂಡಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಅಪಘಾತ
ಸುಳ್ಯ: ಕಲ್ಲುಗುಂಡಿ: ಮಾಣಿ- ಮೈಸೂರು ರಾಷ್ಟ್ರೀಯ
ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡಪಾಲ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಇಳಿದು ಬರೆಗೆ ವಾಲಿ ನಿಂತಿದೆ.

ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ
ಎಂದು ತಿಳಿದು ಬಂದಿದೆ. ಮಂಗಳೂರಿನಿಂದ ಮೈಸೂರು
ಕಡೆಗೆ ಈ ಬಸ್ ತೆರಳುತ್ತಿತ್ತು ಎನ್ನಲಾಗಿದೆ.