ಕರಾವಳಿಕ್ರೈಂ

ಮಂಗಳೂರು: “ರಕ್ತಕ್ಕೆ ರಕ್ತವೇ ಉತ್ತರವಾಗಬೇಕು” ಎನ್ನುವ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಈ  ಹಿಂದೆ ಮಂಗಳೂರು ನಗರ  ಕಮಿಷನರೇಟ್ ವ್ತಾಪ್ತಿಯಿಂದ ವಿಶೇಷ ತಂಡಗಳನ್ನು ರಚನೆ ಮಾಡಿದ್ದು ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ ಬಂಧಿತ ಆರೋಪಿ.
ಈತನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 85/2025 ಕಲಂ.196,353(2),351(3) ಭಾರತೀಯ ನ್ಯಾಯಾ ಸಂಹಿತೆ 2023  ಪ್ರಕರಣ ದಾಖಲಾಗಿದ್ದು, ನಂತರ ,ಮುಂದಿನ ತನಿಖೆಗೆ ಸೆನ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ  ಮಾಡಲಾಗಿತ್ತು. ಈತ ಸಾಮಾಜಿಕ ಜಾಲತಾಣವಾದ  ಇನ್ ಸ್ಟಾ ಗ್ರಾಂ ನಲ್ಲಿ  “ನಮಗೆ ಯಾವುದೇ ರೀತಿಯ ಉತ್ತರಗಳು  ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು “ ಎಂಬುದಾಗಿ ಸ್ಟೇಟಸ್  ಹಾಕಿದ್ದು, ಆತನನ್ನು ಜು.3ರಂದು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!