ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲು
ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಮೇಲೆ ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಯಾಜ್ ಕಡಂಬು ಅವರು ಆಧಾರ ರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು ಇದು ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.