ವಿಟ್ಲ ಅಂಬೇಡ್ಕರ್ ಭವನಕ್ಕೆ ಅನುದಾನ ಮಂಜೂರು ಮಾಡಿದ ಶಾಸಕ ಅಶೋಕ್ ರೈಗೆ ದಲಿತ್ ಸೇವಾ ಸಮಿತಿಯಿಂದ ಗೌರವಾರ್ಪಣೆ
ಪುತ್ತೂರು: ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ರೂ. 75,0000 ಲಕ್ಷ ಅನುದಾನ ಮಂಜೂರು ಮಾಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ಯವರನ್ನು ವಿಟ್ಲದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಹೂಗುಚ್ಛ ನೀಡಿ ಶಾಲು ಹೊದಿಸಿ ಭಾರತದ ಸಂವಿಧಾನ ಪುಸ್ತಕ ನೀಡಿ ಗೌರವಿಸಲಾಯಿತು.

ಸುಮಾರು 40 ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಮತ್ತು ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಮನವಿ ನೀಡಲಾಯಿತು.

ಶಾಸಕರು ಕೂಡ ಸಂಘಟನೆಯ ಸ್ಥಾಪಕಧ್ಯಕ್ಷರಾದ ಬಿ.ಕೆ. ಸೇಸಪ್ಪ ಬೆದ್ರಕಾಡುರವರಿಗೆ ಶಾಲು ಹೊದಿಸಿ ಗೌರವಿಸಿದರು. ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಅಂಬೇಡ್ಕರ್ ಭವನಕ್ಕೆ ಶಾಸಕರು ಅನುದಾನ ಮಂಜೂರು ಮಾಡಿದ್ದಾರೆ ಎಂದು ಬಿ.ಕೆ. ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ.