ಮಹಿಳೆ ದೂರು: ಆರ್.ಸಿ.ಬಿ ವೇಗಿ ಯಶ್ ದಯಾಳ್ ವಿರುದ್ಧ ಪ್ರಕರಣ ದಾಖಲು
ಮಹಿಳೆಯೊಬ್ಬರಿಗೆ ವಂಚನೆ, ದೈಹಿಕ ಮತ್ತು ಮಾನಸಿಕ ಕಿರುಕುಳದ ಆರೋಪದ ಮೇರೆಗೆ ಉತ್ತರ ಪ್ರದೇಶ ಪೊಲೀಸರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಯಶ್ ದಯಾಳ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

27 ವರ್ಷದ ಕ್ರಿಕೆಟಿಗನ ವಿರುದ್ಧ ಭಾನುವಾರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಬಿಎನ್ಎಸ್) ಸೆಕ್ಷನ್ 69 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಯಶ್ ದಯಾಳ್ ಜೊತೆಗಿನ ತಮ್ಮ ಐದು ವರ್ಷಗಳ ಸಂಬಂಧದಲ್ಲಿ ಕ್ರಿಕೆಟಿಗನಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಶೋಷಣೆಗೊಳಗಾಗಿದ್ದೇನೆ ಮತ್ತು ಆ ಸಮಯದಲ್ಲಿ ಅವರ ಕುಟುಂಬವು ತನಗೆ ಸುಳ್ಳು ಭರವಸೆಗಳನ್ನು ನೀಡಿದೆ ಎಂದು ಆರೋಪಿಸಿದ್ದಾರೆ