ಸಿದ್ದರಾಮಯ್ಯ ಬಗ್ಗೆ ಪಕ್ಷದ ಶಾಸಕರೇ ವಿಶ್ವಾಸ ಕಳೆದುಕೊಂಡಿದ್ದಾರೆ:ಬಿ.ವೈ ವಿಜಯೇಂದ್ರ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲದಂತಾಗಿದೆ. ಇದರಿಂದ ಜನರೂ ಕೂಡ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

15 ಬಾರಿ ಬಜೆಟ್ ಮಂಡಿಸಿದ ಅನುಭವವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಭಿವೃದ್ಧಿ ಇಲ್ಲ, ಇದರ ಜೊತೆಗೆ ಮುಖ್ಯಮಂತ್ರಿ ಬದಲಾವಣೆಯ ಮಾತುಗಳೂ ಕೇಳಿ ಬಂದಿವೆ ಎಂದರು.
ಕಾನೂನು ಸುವ್ಯವಸ್ಥೆ ಕುಸಿದಿದೆ. ಮಂಗಳೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆ ಅಹಿತಕರ ಘಟನೆಗಳು ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸುವುದಾಗಿ ಅವರು ಹೇಳಿದ್ದಾರೆ.
ಹಾಸನ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೃದಯಾಘಾತದಿಂದ ಸಾವು ಸಂಭವಿಸುತ್ತಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದಿರುವುದು ಖಂಡನೀಯ. ಇಂತಹ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗಿದೆ ಎಂದು ತಿಳಿಸಿದರು.