ಉಪ್ಪಿನಂಗಡಿ: ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಯುವಕ ಮೃತ್ಯು
ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರಿದಯಾಗಿದೆ. 34 ನೆಕ್ಕಿಲಾಡಿಯ ಸುಭಾಷ್ ನಗರ ನಿವಾಸಿ ನೌಶಾದ್ (35) ಮೃತಪಟ್ಟವರು.

ಬಕ್ರೀದ್ ದಿನದಂದು ಸುಭಾಶ್ ನಗರದ ಮನೆಯಿಂದ ಮಸೀದಿಗೆಂದು ಬೈಕ್‌ನಲ್ಲಿ ಹೊರಟಿದ್ದ ಇವರಿಗೆ ಬೊಳ್ಳಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸುವಾಗ ಮಾಣಿ ಕಡೆಯಿಂದ ಬಂದ ಬೈಕೊಂದು ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಇವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಚೇತರಿಸಿಕೊಳ್ಳುವ ಲಕ್ಷಣಗಳು ಕಾಣದಿದ್ದಾಗ ಕೆಲವು ದಿನಗಳ ಹಿಂದೆ ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.