ಜು.12: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ
ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜು.12 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ‘ಪೆರ್ಮೆದ ಬಂಟೆರ್ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಕಾಠ್ಯಕ್ರಮ ನಡೆಯಲಿದೆ ಎಂದು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಜು.9 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾವು ಹೇಮನಾಥ ಶೆಟ್ಟಿ ಅವರು ಈ ಕಾಠ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬರಲು ಎಲ್ಲರೂ ಪೂರ್ಣ ರೀತಿಯ ಸಹಕಾರವನ್ನು ನೀಡಬೇಕು. ನಮ್ಮ ಸಮಾಜದ ಬಂಟ ಸಾಧಕರನ್ನು ಗುರುತಿಸುವುದು, ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಬಂಟರು ಜಾಗತಿಕವಾಗಿ ನಾನಾ ರೀತಿಯ ಸಾಧನೆಯನ್ನು ಮಾಡಿ, ಸಮಾಜಕ್ಕೆ ಹೆಮ್ಮೆಯನ್ನು ತಂದ ಬಂಟ ಸಮಾಜದ 12 ಮಂದಿ ಸಾಧಕರನ್ನು ಸನ್ಮಾನಿಸಲಿದ್ದೇವೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ನಡೆಯುವ ಈ ಕಾಠ್ಯಕ್ರಮದಲ್ಲಿ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಕುಂಬ್ರ ದುರ್ಗಾಪ್ರಸಾದ್ ರೈ, ಬಂಟರ ಸಂಘದ ಪ್ರಧಾನ ಕಾವ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ ಹಾಗೂ ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.