ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ
ಮಂಗಳೂರು:ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿದಿದೆ.

ಮೇ 27ರಂದು ಬಂಟ್ವಾಳ ತಾಲೂಕಿನ ಕೊಳತ್ತಮಜಲಿನಲ್ಲಿ ಅಬ್ದುಲ್ ರಹೀಂ ಅವರನ್ನು ತಂಡವೊಂದು ಕೊಲೆ ನಡೆಸಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹತ್ತು ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ.
ಈ ಪೈಕಿ ಬಂಟ್ವಾಳ ನಿವಾಸಿ ಅಭಿನ್ ರೈ (32) ಮತ್ತು ಶೃಂಗೇರಿ ನಿವಾಸಿ ರವಿ ಸಂಜಯ್ (29) ಎಂಬುವವರನ್ನು ಆರೋಪಿಗಳನ್ನಾಗಿ ಬಂಧಿಸಲಾಗಿತ್ತು. ಬಂಧನದ ಬಳಿಕ ಇವರಿಬ್ಬರೂ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಜು.15ರಂdu ಅರ್ಜಿಯ ವಿಚಾರಣೆ ನಡೆಸಿ, ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.