ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿದ್ದ, ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿದ್ದ, ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ನಾಲ್ಕು ತಿಂಗಳೊಳಗೆ ಟ್ರಯಲ್ ಕೋರ್ಟ್ ನಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಸಲು ಹಾಗೂ ಅಲ್ಲಿಯವರೆಗೆ ಯಾವುದೇ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ಆದೇಶಿಸಿದೆ ಎಂದು ತಿಳಿದು ಬಂದಿದೆ.