ಜೋರು ಮಳೆ ಇದ್ದರೆ ಶಾಲೆಗಳಿಗೆ ರಜೆ ನೀಡಿ! ಡಿ.ಸಿಗೆ ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು.17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಶಾಸಕರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಜು.16 ರಂದು ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೋರು ಮಳೆ ಇದ್ದಲ್ಲಿ ಗ್ರಾಮಾಂತರ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗಲು ಕಷ್ಟ ಸಾಧ್ಯವಾಗುತ್ತಿದೆ. ಅಪಾಯವನ್ನು ಅರಿತು ಜಿಲ್ಲಾಧಿಕಾರಿಗಳು ತೀರ್ಮಾನವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಗಿಲನ್‌ರವರು ಜಿಲ್ಲೆಯಲ್ಲಿ ಜೋರು ಮಳೆ ಇದ್ದಾಗ ಶಾಲಾ ಕಾಲೇಜುಗಳಿಗೆ ರಜೆ ನೀಡುತ್ತಿದ್ದರು.