ಧರ್ಮಸ್ಥಳ ಠಾಣೆಗೆ ಆಗಮಿಸಿದ ಎಸ್ ಐ ಟಿ ತಂಡ
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳು ಶುಕ್ರವಾರ ರಾತ್ರಿ
ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿ ಪಿಎಸ್ಸೆ ಸಮರ್ಥ್ ರಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಇಂದಿನಿಂದಲೇ ಅಧಿಕೃತವಾಗಿ ತನಿಖಾ ಕಾರ್ಯ ಆರಂಭವಾಗಿದೆಎಂದು ತಿಳಿದು ಬಂದಿದೆ.