ಕರಾವಳಿಕ್ರೈಂ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಬಂಧನ


ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.


 ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿರುತ್ತಾರೆ.
ಬಂಧಿತ ಆರೋಪಿಗಳನ್ನು
ಕಾಸರಗೋಡು ಮೂಲದ ಮಸೂದ್ ಎಂಕೆ (45)  ಮೊಹಮ್ಮದ್ ಆಶಿಕ್ (24) ಹಾಗೂ ಸುಬೇರ್(30) ಎಂದು ಗುರುತಿಸಲಾಗಿದೆ.


ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯು ಮುಂದುವರೆದಿರುತ್ತದೆ, ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!