ಧರ್ಮಸ್ಥಳ: ಎಸ್.ಐ.ಟಿಗೆ ಮತ್ತೋರ್ವ ವ್ಯಕ್ತಿಯಿಂದ ದೂರು
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ಘಟನೆಗೆ ಸಂಬಂಧಿಸಿ ದೂರುದಾರ ಗುರುತಿಸಿದ ಸ್ಥಳಗಳನ್ನು ಅಗೆಯುವ ಪ್ರಕ್ರಿಯೆ ನಡೆಯುತ್ತಿರುವುದರ ಮಧ್ಯೆಯೇ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾದ ಜಯಂತ್ ಟಿ ಎಂಬವರು ತಾನು ನೋಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಎಸ್.ಐ.ಟಿ ತಂಡದ ಮೇಲೆ ವಿಶ್ವಾಸವಿರಿಸಿ ದೂರು ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಾನು ಸುಮಾರು 15 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಬಾಲಕಿಯ ಮೃತದೇಹವನ್ನು ನೋಡಿದ್ದೇನೆ. ಅದನ್ನು ಯಾವುದೇ ತನಿಖೆ ನಡೆಸದೆ ಮೃತದೇಹವನ್ನು ಹೂತು ಹಾಕಿರುವುದಾಗಿ ತನಗೆ ಮಾಹಿತಿಯಿದೆ. ಈ ಬಗ್ಗೆ ದೂರು ನೀಡಿದ್ದೇನೆ, ಇನ್ನೂ ಇಂತಹ ಅನೇಕ ಪ್ರಕರಣಗಳ ಬಗ್ಗೆ ದೂರು ನೀಡಲು ಜನರು ಸಿದ್ಧರಾಗಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಇನ್ನೂ ಹಲವರು ದೂರು ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.