ಬಂಟ್ವಾಳ ತಾಲೂಕಿನ ವಿವಿಧೆಡೆ ಪೊಲೀಸ್ ಪಥ ಸಂಚಲನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆ.2ರಂದು ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ.ಸಿ ರೋಡ್ ಮತ್ತು ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ ಆ.3ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಯಿತು.