ಪುತ್ತೂರು: ಫೇಸ್ ಬುಕ್’ನಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವ ಸಂದೇಶ ಪೋಸ್ಟ್; ಪ್ರಕರಣ ದಾಖಲು*

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ, ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಕೋಮು ಸೌಹಾರ್ಧತೆಗೆ ದಕ್ಕೆಯಾಗುವಂತಹ ಹಾಗೂ ಅನ್ಯ ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಸದ್ರಿ ಫೇಸ್ಬುಕ್ ಖಾತೆಯಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ. ಸದ್ರಿ ಫೆಸ್ಬುಕ್ ಸಂದೇಶದಿಂದ ವಿಭಿನ್ನ ಕೋಮುಗಳ ನಡುವೆ ದ್ವೇಷ ಮೂಡಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯಾಗುವ ಸಾದ್ಯತೆ ಇರುವುದರಿಂದ, ಈ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, ಕಲಂ: 196(1) (a) 353(2)BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.